ಮಂಡ್ಯ (www.vknews.in) | ಐಸ್ ಕ್ರೀಮ್ ಸೇವಿಸಿ ಒಂದೂವರೆ ವರ್ಷದ ಅವಳಿ ಮಕ್ಕಳು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬೆಟಹಳ್ಳಿಯ ಪ್ರಸನ್ನ ಮತ್ತು ಪೂಜಾ ದಂಪತಿಯ ಮಕ್ಕಳಾದ ತ್ರಿಶೂಲ್ ಮತ್ತು ತ್ರಿಷಾ ಎಂದು ಗುರುತಿಸಲಾಗಿದೆ.
ಬುಧವಾರ ಸಂಜೆ ಅವರ ತಾಯಿ ಗಾಡಿಯಿಂದ ಐಸ್ ಕ್ರೀಮ್ ಖರೀದಿಸಿದ್ದರು. ಐಸ್ ಕ್ರೀಮ್ ತಿಂದ ಮೂವರು ನಂತರ ಅಸ್ವಸ್ಥಗೊಂಡರು. ಆಸ್ಪತ್ರೆಗೆ ದಾಖಲಾದ ಮಕ್ಕಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಕ್ಕಳೊಂದಿಗೆ ಐಸ್ ಕ್ರೀಂ ತಿಂದಿದ್ದ ಪೂಜಾ ಕೂಡ ಅಸ್ವಸ್ಥಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸನ್ನ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಗಾಡಿಯಲ್ಲಿ ಒಂದೇ ಮಾರಾಟಗಾರನಿಂದ ಐಸ್ ಕ್ರೀಮ್ ಸೇವಿಸಿದ ಹಲವಾರು ಜನರಿದ್ದರು ಆದರೆ ಯಾರೂ ಯಾವುದೇ ಸಮಸ್ಯೆಗಳನ್ನು ವರದಿ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳ ಸಾವು ಪ್ರಕರಣ ಅನುಮಾನಾಸ್ಪವಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.