ಮಂಗಳೂರು (www.vknews.in) : ಕಾಂಗ್ರೆಸ್ ನಾಯಕಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ನಾನು ಪಕ್ಷ ಸೇರ್ಪಡೆಯಾಗಿದ್ದೇನೆ. ನನ್ನ ರಾಜಕೀಯ ಗುರು ಜನಾರ್ದನ ಪೂಜಾರಿ ಆಶೀರ್ವಾದ ಪಡೆದು ಬಂದಿದ್ದೇನೆ. ಕಳೆದ ಕೆಲವು ತಿಂಗಳಲ್ಲಿ ಕೊಲೆ ಸರಣಿಯೇ ಆಗಿಹೋಗಿದೆ. ಇದು ಇವರ ಆಡಳಿತ ಸ್ಥಿತಿ. ಅಯೋಧ್ಯೆಯಲ್ಲಿ ರಾಮ ಮಂದಿರ ಆಗಿರೋದು ನಮ್ಮೆಲ್ಲರ ಭಾಗ್ಯ. ಈ ಸಲದ ಚುನಾವಣೆ ಮೋದಿಗಾಗಿ ಕೊಡುವ ಮತ ಅಲ್ಲ. ರಾಮನಿಗಾಗಿ ಕೊಡುವ ಮತ. ಈ ಬಾರಿ ಅತಿ ಹೆಚ್ಚು ಮತಗಳಿಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ನಾವು ಗೆಲ್ಲಿಸಬೇಕಾಗಿದೆ ಎಂದು ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಕವಿತಾ ಸನಿಲ್ ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.