ಬಂಟ್ವಾಳ (www.vknews.in) ; ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಪೂರ್ವಾದ್ಯಕ್ಷ ಎಸ್.ಎಂ. ಮುಹಮ್ಮದ್ ಅಲಿ ಶಾಂತಿ ಅಂಗಡಿ ಅವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ರಶೀದ್ ವಿಟ್ಲ ಅಭಿನಂದಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ಕೋಶಾಧಿಕಾರಿ ಎಂ.ಎಚ್.ಇಕ್ಬಾಲ್, ಉಪಾಧ್ಯಕ್ಷರಾದ ಲತೀಫ್ ನೇರಳಕಟ್ಟೆ, ಶೇಖ್ ರಹ್ಮತುಲ್ಲಾ ಕಾವಳಕಟ್ಟೆ, ಪೂರ್ವಾದ್ಯಕ್ಷರುಗಳಾದ ಎಫ್.ಎಂ.ಬಶೀರ್ ಫರಂಗಿಪೇಟೆ, ಆಸಿಫ್ ಇಕ್ಬಾಲ್ ಕುಂಪನಮಜಲು, ಸುಲೈಮಾನ್ ಸೂರಿಕುಮೇರು, ಪಿ. ಮುಹಮ್ಮದ್ ಪಾಣೆಮಂಗಳೂರು, ಬಿ.ಎಂ.ತುಂಬೆ, ಸದಸ್ಯರಾದ ಅಬ್ದುಲ್ ರಝಾಕ್ ಅನಂತಾಡಿ, ಹಾಜಿ ಅಹ್ಮದ್ ಮುಸ್ತಫಾ ಗೋಳ್ತಮಜಲು, ಹಕೀಂ ಕಲಾಯಿ, ಮುಹಮ್ಮದ್ ನಾರಂಗೋಡಿ ಮೊದಲಾದವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.