ಪಾಟ್ನಾ (www.vknews.in) : ಬಿಹಾರದ ಸಮಸ್ತಿಪುರದಲ್ಲಿ ಗರ್ಭಣಿ ಮಹಿಳೆಯೋರ್ವರು ಶಸ್ತ್ರಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. 28 ವರ್ಷದ ಬಬಿತಾ ದೇವಿ ಮೃತರು. ಸಮಸ್ತಿಪುರ ಜಿಲ್ಲೆಯ ಮುಸ್ರಿಘರಾರಿಯಲ್ಲಿರುವ ಖಾಸಗಿ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ವೈದ್ಯರು ಸಿಗದ ಕಾರಣ ಕಾಂಪೌಂಡರ್ (ಕಿರಿಯ ಸಿಬ್ಬಂದಿ) ಶಸ್ತ್ರಚಿಕಿತ್ಸೆ ನಡೆಸಿದರು.
ಬೆಳಗ್ಗೆ 9 ಗಂಟೆ ಸುಮಾರಿಗೆ ಬಬಿತಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. 11 ಗಂಟೆಗೆ ಶಸ್ತ್ರಚಿಕಿತ್ಸೆಯ ಪ್ರಕ್ರಿಯೆ ಪ್ರಾರಂಭವಾಯಿತು. ಒಂದು ಗಂಟೆಯ ನಂತರ, ಅವರನ್ನು ಆಂಬ್ಯುಲೆನ್ಸ್ನಲ್ಲಿ ಮೋಹನ್ಪುರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಯುವತಿಯ ಆರೋಗ್ಯ ಸ್ಥಿತಿ ಬಗ್ಗೆ ಏನನ್ನೂ ಹೇಳಿಲ್ಲ ಎಂದು ಬಬಿತಾ ಸಂಬಂಧಿಕರು ತಿಳಿಸಿದ್ದಾರೆ.
ಬಬಿತಾ ಮೃತದೇಹದೊಂದಿಗೆ ಕುಟುಂಬಸ್ಥರು ಆರೋಗ್ಯ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು. ನೌಕರರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಕುಟುಂಬದವರು ಆಗ್ರಹಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.