ಬೆಳಗಾವಿ (www.vknews.in) : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದನ್ನು ಎದೆಗೆ ಕಾಲಿಟ್ಟು ಒತ್ತಿ ಕೊಂದ ಭೀಕರ ಘಟನೆ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್(3) ಮೃತಪಟ್ಟ ಮಗು. ಜೋತಿಭಾ ತುಕಾರಾಮ ಬಾಬಾಬರ ಎಂಬಾತ ಮಗುವನ್ನು ಭೀಕರವಾಗಿ ಕೊಲೆ ಮಾಡಿದ ಆರೋಪಿ.
ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎನ್ನಲಾಗಿದೆ. ಮೃತ ಮಗುವಿನ ಕುಟುಂಬಸ್ಥರ ರೋದನ ಮುಗಿಳು ಮುಟ್ಟಿದೆ. ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.