ವಯನಾಡ್ (www.vknews.in) : ವಯನಾಡ್ ಜಿಲ್ಲೆಯ ಲಕ್ಕಿಡಿಯಲ್ಲಿ ಪಾಸ್ ಪ್ರವೇಶದ್ವಾರದ ಬಳಿ ಎರಡು ಮೋಟಾರ್ ಸೈಕಲ್ ಗಳು ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದಾನೆ. ಮೃತರನ್ನು ತಾಮರಶ್ಶೇರಿಯ ಕೂಡರಂಜಿ ಕುಂಬಾರ ನಿವಾಸಿ ಫಿರೋಜ್ (41) ಎಂದು ಗುರುತಿಸಲಾಗಿದೆ.
ಲಕ್ಕಿಡಿ ಅರಣ್ಯ ಚೆಕ್ ಪೋಸ್ಟ್ ಬಳಿ ಮೂರು ಬೈಕ್ ಗಳು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಫಿರೋಜ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಗಾಯಗೊಂಡ ಯುವಕ ವೈತಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.