ಬೆಂಗಳೂರು (www.vknews.in) : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಹಾಗೂ ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ. ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ.
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ.. • ಅಂಕಿತಾ ಬಸಪ್ಪ ಕೊನ್ನೂರು (ಬಾಗಲಕೋಟೆ) 625/625 (ಪ್ರಥಮ) • ಮೇದಾ ಪಿ ಶೆಟ್ಟಿ (ಬೆಂಗಳೂರು) 625ಕ್ಕೆ 624 ಅಂಕ • ಹರ್ಷಿತಾ ಡಿಎಂ (ಮಧುಗಿರಿ) 625ಕ್ಕೆ 624 ಅಂಕ • ಚಿನ್ಮಯ್ (ದಕ್ಷಿಣ ಕನ್ನಡ) • ಸಿದ್ದಾಂತ್ (ಚಿಕ್ಕೊಡಿ ) • ದರ್ಶನ್ (ಶಿರಸಿ) • ಚಿನ್ಮಯ್ (ಶಿರಸಿ) • ಶ್ರೀರಾಮ್ (ಶಿರಸಿ)
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.