ಮುಂಬೈ (www.vknews.in) : ಗುರುವಾರ ತಡರಾತ್ರಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಕುಡಿದ ಮತ್ತಿನಲ್ಲಿದ್ದ ಮೂವರು ಯುವತಿಯರು ರಂಪಾಟ ಮಾಡಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ನಡೆದಿದೆ.
ಪೊಲೀಸರು ಕುಡಿದು ವಾಹನ ಚಲಾಯಿಸುವವರ ಪತ್ತೆಗಾಗಿ ಪಾಲ್ಘರ್ನ ವಿರಾರ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಯುವತಿಯರು ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಯುವತಿಯರು ಪೊಲೀಸ್ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದು, ದೌರ್ಜನ್ಯ ನಡೆಸುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ. ಸದ್ಯ ಯುವತಿಯರನ್ನು ಬಂಧಿಸಿರುವ ಪೊಲೀಸರು, ಐಪಿಸಿ ಸೆಕ್ಷನ್ 353, 323, 325, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.