(www.vknews. in) ; ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಡ ಶಾಲೆ ಗೂನಡ್ಕ 2023-24 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸತತವಾಗಿ 6 ನೇ ಬಾರಿಗೆ ಶೇ. 100 ಪಲಿತಾಂಶ ಬಂದಿರುತ್ತದೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100 ಪಲಿತಾಂಶ ದಾಖಲಾಗಿರುತ್ತದೆ.
ಜುನೈಹ ತೆಕ್ಕಿಲ್ ಪೇರಡ್ಕ 554 ಅಂಕ ಹಾಗೂ ಮಿಶ್ರಿಯಾ 550 ಅಂಕ ಪಡೆದು ಡಿಸ್ಟಿಂಕ್ಷನ್ ಪಡೆದಿದ್ದರೆ, ಆಯಿಷಾ ತೆಕ್ಕಿಲ್ ಪೇರಡ್ಕ 481, ಆಯಿಷತ್ ಬಿಷರಾ ಎಂ.ಯು ತೆಕ್ಕಿಲ್ ಪೇರಡ್ಕ 448 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ತೇರ್ಗಡೆಗೊಂಡ ಎಲ್ಲಾ ವಿದ್ಯಾರ್ಥಿಗಳನ್ನು ಮತ್ತು ಕಾರಣಕರ್ತರಾದ ಶಿಕ್ಷಕ ವರ್ಗದವರನ್ನು ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್, ಟ್ರಸ್ಟ್ ನ ಕಾರ್ಯದರ್ಶಿ ಅಶ್ರಫ್ ಗುಂಡಿ ಅಭಿನಂಧಿಸಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.