ಚಿಕ್ಕಬಳ್ಳಾಪುರ, (ವಿಶ್ವ ಕನ್ನಡಿಗ ನ್ಯೂಸ್): ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ವ್ಯಾಪ್ತಿಯಲ್ಲಿ ಕುಡಿಯವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿ ಇ ಓ ಪ್ರಕಾಶ್ ಜಿಟಿ ನಿಟ್ಟಾಲಿ ಸೂಚನೆ ನೀಡಿದ್ದಾರೆ.
ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯ 53 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೆಲವೊಂದು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ ಅದನ್ನು ಕೂಡಲೇ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಾಲು ತಾಲೂಕುಗಳಲ್ಲಿ ಈಗಾಗಲೇ ಮಳೆಯಾಗುತ್ತಿದೆ ಮಳೆಯ ನೀರು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪಂಚಾಯತಿ ಅಧಿಕಾರಿಗಳು ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ವಿಶೇಷವಾಗಿ ಗಮನ ಹರಿಸಬೇಕು ಜಲ ಮೂಲಗಳನ್ನು ಸಂರಕ್ಷಣೆ ಮಾಡುವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕೆಂದು ನಿರ್ದೇಶನ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ವ್ಯಾಪ್ತಿಯಲ್ಲಿ ಯಾವುದೇ ಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ ಕೂಡಲೇ ವರದಿ ಸಲ್ಲಿಸಬೇಕು ಯಾವುದೇ ಕಾರಣಕ್ಕೂ ಟ್ಯಾಂಕರ್ ಮೂಲಕ ನೀರು ಪಾವತಿ ಮಾಡುವ ಬದಲಿಗೆ ಸರ್ಕಾರಿ ಅಥವಾ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
ಇದೇ ವೇಳೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ, ಸಕಾಲ, ಸ್ವಚ್ಛ ಭಾರತ್ ಮಿಷನ್, ವಾರ್ಷಿಕ ತೆರಿಗೆ ವಸೂಲಿ ಪ್ರಮಾಣದ ಪ್ರಗತಿಯನ್ನು ಸಹ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಪರಿಶೀಲಿಸಿದ್ದಾರೆ.
ವರದಿ: ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.