ಚಿಕ್ಕಬಳ್ಳಾಪುರ, (ವಿಶ್ವ ಕನ್ನಡಿಗ ನ್ಯೂಸ್) ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗಿದೆ ಆದರೆ ಯಾವುದೇ ರೀತಿಯ ಹಾನಿಯಾಗಿರುವ ಕುರಿತು ವರದಿಗಳು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಪಿ ಏನ್ ರವೀಂದ್ರ ಸ್ಪಷ್ಟಪಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ಚಿಕ್ಕಬಳ್ಳಾಪುರ ನಗರದಲ್ಲಿ ಸುರಿದ ಮಳೆಯಿಂದಾಗಿ ಅನೇಕ ಮನೆಗಳಲ್ಲಿ ಯುಜಿಡಿ ನೀರು ನುಗ್ಗಿರೋ ಬಗ್ಗೆ ಗಮನ ಸೆಳೆದಾಗ ಈಗಾಗಲೇ ನಗರಸಭೆ ಪೌರಾಯುಕ್ತರಿಗೆ ಮಳೆ ನೀರು ಸರಾಗವಾಗಿ ಹರಿಯಲು ಸ್ವಚ್ಛತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದ್ದೇನೆ ಎಂದರು.
ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಿಂದ ಆಗುವ ಹಾನಿಯ ಕುರಿತು ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸುವ ಸಲುವಾಗಿ ಪ್ರತಿಯೊಂದು ತಾಲೂಕಿನ ಕೇಂದ್ರಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆದಿದ್ದು ಸಾರ್ವಜನಿಕರು ಇದರ ಮೂಲಕ ಮಾಹಿತಿ ನೀಡಬೇಕೆಂದು ಮನವಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ನಗರದ 8 ಮತ್ತು 9 ವಾರ್ಡ್ಗಳಲ್ಲಿ ಮನೆಗಳಲ್ಲಿ ಯುಜಿಡಿ ಮತ್ತು ಕಲಿಷಿತ ನೀರು ನುಗ್ಗಿರುವ ಕುರಿತು ಗಂಭೀರವಾಗಿ ಪರಿಗಣಿಸುತ್ತೇವೆ ತತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದ ಜಿಲ್ಲಾಧಿಕಾರಿಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಂಭವವಿದ್ದು ಜಿಲ್ಲಾಡಳಿತದೊಂದಿಗೆ ನಾಗರಿಕರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ನಗರದ ವಿವಿಧಡೆ ಕಾಲುವೆಗಳನ್ನು ಸ್ವಚ್ಛಗೊಳಿಸುವ ಪ್ರಕ್ರಿಯೆ ಈಗಾಗಲೇ ಆರಂಭಿಸಲಾಗಿದೆ ಮಳೆಯಿಂದ ಬೆಳೆ, ಅಥವಾ ಸಾರ್ವಜನಿಕರ ಆಸ್ತಿಪಾಸ್ತಿಗಳ ಬಗ್ಗೆ ಹಾನಿಯಾಗಿರುವ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ವರದಿ: ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.