ಚಿಕ್ಕಬಳ್ಳಾಪುರ, (ವಿಶ್ವ ಕನ್ನಡಿಗ ನ್ಯೂಸ್): ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ಎಚ್ಚರ ವಹಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಜಾವೀದಾ ನಸೀಮಾ ಖಾನುಂ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ನಗರದ ವಿವಿಧ ರಸಗೊಬ್ಬರ ಅಂಗಡಿಗಳಿಗೆ ದಿಡೀರ್ ಭೇಟಿ ನೀಡಿ ದಾಸ್ತಾನು ಪರಿಶೀಲಿಸಿದ ನಂತರ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಜಿಲ್ಲೆಯ ಕೆಲವು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿತ್ತು ಅದಾಗಿಯೂ ಇಲಾಖೆಯೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆ ಬರುವ ಸಾಧ್ಯತೆಯನ್ನು ಅರಿತು ರೈತರಿಗೆ ಅಗತ್ಯವಾಗಿರುವ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಪೂರೈಕೆ ಮಾಡಲು ಕ್ರಮ ಕೈಗೊಂಡಿದ್ದೇವೆ ಜೊತೆಗೆ ದಾಸ್ತಾನುಗಳನ್ನು ಕಾಲಕಾಲಕ್ಕೆ ಪರಿಶೀಲಿಸುವ ಕೆಲಸವನ್ನು ಸಹ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗಿದೆ ರೈತರಿಗೆ ಅಗತ್ಯ ಬಿತ್ತನೆಬೀಜ ಮತ್ತು ರಸಗೊಬ್ಬರವನ್ನು ಪೂರೈಕೆ ಮಾಡಲು ಇಲಾಖೆ ಸರ್ವಸನ್ನದವಾಗಿದೆ ರೈತರು ಯಾವುದೇ ರೀತಿಯ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.
Oplus_0
ಕೃಷಿ ಇಲಾಖೆಯ ಮೂಲಕ ವಿತರಣೆ ಆಗುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಕುರಿತು ಮಾಹಿತಿಯನ್ನು ಪಾರದರ್ಶಕವಾಗಿ ಇಡಲಾಗಿದೆ ಪ್ರತಿಯೊಂದು ಸಹ ದಾಖಲಾಗಿರುತ್ತದೆ ರೈತರಿಗೂ ಸಹ ಕೆಲವೊಂದು ದಾಖಲೆಗಳನ್ನು ನೀಡಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪಡೆದುಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಜಿಲ್ಲೆಯ ರೈತರಿಗೆ ಅಗತ್ಯವಾಗಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಪೂರೈಕೆ ಮಾಡಲು ಇಲಾಖೆ ಸಜ್ಜಾಗಿದೆ ಎಂದರು.
ಈ ಸಂದರ್ಭದಲ್ಲಿ ಇಲಾಖೆಯ ಉಪನಿರ್ದೇಶಕಿ ದೀಪಾ ಶ್ರೀ, ವಿಜಿಲೆನ್ಸ್ ಎಡಿಎ ಪ್ರಮೋದ್, ಅಧಿಕಾರಿಗಳಾದ ಶ್ರೀನಿವಾಸ್ ಹಾಗೂ ಇಲಾಖೆಯ ತಾಂತ್ರಿಕ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.