ಹಳೆಯಂಗಡಿ (www.vknews. in) : ರಿಲಯನ್ಸ್ ಎಸೋಸಿಯೇಶನ್ (ರಿ) ಬೊಳ್ಳೂರು ಹಳೆಯಂಗಡಿ ಇದರ 27ನೇ ವಾರ್ಷಿಕೋತ್ಸವದ ಪ್ರಯುಕ್ತ ಸಾಮೂಹಿಕ ವಿವಾಹ ಕಾರ್ಯಕ್ರಮವು ಮೇ 26ರಂದು ಮುಹಿಯ್ಯುದ್ದೀನ್ ಜುಮಾ ಮಸ್ಜಿದ್ ವಠಾರದಲ್ಲಿ ನೆರವೇರಲಿದೆ.
ರಿಲಯನ್ಸ್ ಎಸೋಸಿಯೇಶನ್, ಬೊಳ್ಳೂರು ಇದರ ಅಧ್ಯಕ್ಷ ಕಲಂದರ್ ಕೌಶಿಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಎಂ.ಜೆ.ಎಂ. ಬೊಳ್ಳೂರು ಇದರ ಖತೀಬರು ಹಾಗೂ ಕಿಲ್ತಾನ್ ಲಕ್ಷದ್ವೀಪದ ಖಾಝಿ ಅಲ್-ಹಾಜಿ ಮುಹಮ್ಮದ್ ಅಝ್ಹರ್ ಫೈಝಿ ಉದ್ಘಾಟಿಸಲಿದ್ದಾರೆ. ಪಾಣಕ್ಕಾಡ್ ಸಯ್ಯಿದ್ ಹಾಶಿರಲಿ ಶಿಹಾಬ್ ತಂಙಳ್ ದುವಾ ಆಶೀರ್ವಚನ ನೀಡಲಿದ್ದಾರೆ.
ಯುನಿವೆಫ್ ಅಧ್ಯಕ್ಷ ರಫೀವುದ್ದೀನ್ ಕುದ್ರೋಳಿ, ಲೇಖಕರು ಹಾಗೂ ಸಾಮಾಜಿಕ ಕಾರ್ಯಕರ್ತ ಇಸ್ಮತ್ ಫಜೀರ್, ನಂಡೆ ಪೆಂಙಳ್ ಅಭಿಯಾನದ ಪ್ರಚಾರ ಮುಖ್ಯಸ್ಥ ರಫೀಕ್ ಮಾಸ್ಟರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ರಿಲಯನ್ಸ್ ಎಸೋಸಿಯೇಶನ್ ಬೊಳ್ಳೂರು (ರಿ.) ಇದರ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮುಬಾರಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.