ಬಂಟ್ವಾಳ (www.vknews. in) : ಬಿ ಸಿ ರೋಡು ಸಮೀಪದ ಮೊಡಂಕಾಪು ಬಳಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಇರುವ ಕಂಬಕ್ಕೆ ಬೆಂಕಿ ಬಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾದ ಘಟನೆ ಮಂಗಳವಾರ ಸಂಭವಿಸಿದೆ.
ಮಂಗಳವಾರ ಅಪರಾಹ್ನ ಸುರಿದ ಗಾಳಿ-ಮಳೆಯ ಸಂದರ್ಭ ಟ್ರಾನ್ಸ್ ಫಾರ್ಮರ್ ಇರುವ ವಿದ್ಯುತ್ ಕಂಬಕ್ಕೆ ಶಾರ್ಟ್ ಸರ್ಕಿಟ್ ಕಾರಣದಿಂದ ಈ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ಕಾರಣದಿಂದ ಕಂಬದಲ್ಲಿದ್ದ ವಿದ್ಯುತ್ ತಂತಿಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲ ಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ತಕ್ಷಣ ಸಮಯ ಪ್ರಜ್ಞೆ ಮೆರೆದ ಸ್ಥಳೀಯರು ಈ ರಸ್ತೆಯ ವಾಹನ ಸಂಚಾರಕ್ಕೆ ಬ್ರೇಕ್ ಹಾಕಿ ಸಂಭಾವ್ಯ ಅನಾಹುತ ತಪ್ಪಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಅಗ್ನಿಶಾಮಕ ಅಧಿಕಾರಿ ರಾಜೇಶ್ ನೇತೃತ್ವದ ಸಿಬ್ಬಂದಿಗಳು ಹಾಗೂ ಮೆಸ್ಕಾಂ ಇಲಾಖಾ ಸಿಬ್ಬಂದಿಗಳು ಬೆಂಕಿ ನಂದಿಸಲು ಕ್ರಮ ಕೈಗೊಂಡರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.