ಚಿಕ್ಕಬಳ್ಳಾಪುರ (ವಿಶ್ವಕನ್ನಡಿಗ ನ್ಯೂಸ್ ) ಸಮಾಜ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ ಬಡವರು ಮತ್ತು ದೀನದಲಿತರ ಕಷ್ಟವೂ ಅರ್ಥ ಆಗುತ್ತದೆ ಜೊತೆಗೆ ಸಂಕಷ್ಟದಲ್ಲಿರುವ ಜನರಿಗೆ ನೆಲವು ನೀಡಬೇಕೆಂದು ಆಸೆಯೂ ಚಿಗುರುತ್ತದೆ.
ಹೌದು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜ ಸೇವಾ ಕಾರ್ಯಗಳ ಮೂಲಕ ತನ್ನದೇ ಆದ ರೀತಿಯಲ್ಲಿ ಛಾಪು ಮೂಡಿಸಿರುವ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ ಅವರು ಮತ್ತೊಮ್ಮೆ ಎಲ್ಲರ ಮನೆ ಮಾತಾಗಿದ್ದಾರೆ.
ಸಮಾಜದಲ್ಲಿರುವ ಪ್ರತಿಯೊಬ್ಬರು ಶೈಕ್ಷಣಿಕವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಭಿವೃದ್ಧಿ ಸಾಧಿಸಿಬೇಕೆಂದು ಸಂಕಲ್ಪ ಮಾಡಿರುವ ಸಮಾಜ ಸೇವಕ ಹಾಗೂ ಬಿಜೆಪಿಯ ಯುವ ನಾಯಕ ಸಂದೀಪ್ ರೆಡ್ಡಿ ಅವರು ಈಗಾಗಲೇ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಯಾವುದೇ ಖಾಸಗಿ ಶಾಲೆಗಳಿಗಿಂತಲೂ ಕಮ್ಮಿ ಇಲ್ಲದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ವಿದ್ಯಾರ್ಥಿಗಳನ್ನು ಕೈಬೀಸಿ ಕರೆಯುವಂತೆ ಅಭಿವೃದ್ದಿಗೊಳಿಸಿದ್ದಾರೆ ಜೊತೆಗೆ ಕ್ಷೇತ್ರದ ಜನರ ಕಲ್ಯಾಣಕ್ಕಾಗಿ ಕೈಲಾದಷ್ಟು ಸೇವಾ ಕಾರ್ಯವನ್ನು ಮಾಡುತ್ತಿರುವ ಸಂದೀಪ್ ರೆಡ್ಡಿ ಅವರ ಕಾರ್ಯವೈಖರಿಗೆ ಎಲ್ಲಾ ಜಾತಿ ಜನಾಂಗದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ರೀತಿಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟು ಮಾಡುತ್ತಿರುವ ಸಂದೀಪ್ ರೆಡ್ಡಿ ಅವರು ಈ ಬಾರಿ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 60ಕ್ಕೂ ಅಧಿಕ ಅಂಕ ಗಳಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲು ಅರ್ಜಿಯನ್ನು ಆಹ್ವಾನಿಸುವ ಮೂಲಕ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡಲು ಮುಂದಾಗಿದ್ದಾರೆ.
ಚಿಕ್ಕಬಳ್ಳಾಪುರ ನಗರದ ವಾಪಸಂದ್ರದ ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡು ಸಂದೀಪ್ ರೆಡ್ಡಿ ಅವರು ಮಾದರಿಯಾಗಿ ಅಭಿವೃದ್ಧಿಗೊಳಿಸಿದ್ದಾರೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಅನೇಕ ಅತ್ಯುತ್ತಮ ಹುದ್ದೆಗಳನ್ನು ಅಲಂಕರಿಸಿದ್ದು ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಛಲವಿದ್ದರೆ ದಾರಿ ತನ ತಾನಾಗಿ ಹುಟ್ಟಿಕೊಳ್ಳುತ್ತದೆ ಎನ್ನುವ ಸಂದೀಪ್ ರೆಡ್ಡಿ ಬಡ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಮುಂದೆ ಬಂದು ಉನ್ನತ ಶಿಕ್ಷಣವನ್ನು ಪಡೆಯುವ ಮೂಲಕ ತಮ್ಮ ಜೀವನ ರೂಪಿಸಿಕೊಳ್ಳುವ ಜೊತೆಗೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಪೋಷಕರಿಗೆ ತಾಲೂಕಿಗೆ ಮತ್ತು ವಿದ್ಯೆ ನೀಡುವ ಗುರುಗಳಿಗೆ ಕೀರ್ತಿ ತರುವಂತಹ ಕೆಲಸ ಮಾಡಬೇಕು ಎಂಬುದೇ ಅವರ ಆಶಯವಾಗಿದೆ.
ಸಲ್ಲಿಸಬೇಕಾದ ದಾಖಲೆಗಳು:
1) ಜಾತಿ ಪ್ರಮಾಣ ಪತ್ರ 2) ಎಸ್ ಎಸ್ ಎಲ್ ಸಿ ಅಂಕಪಟ್ಟಿ ಶಾಲೆಯಲ್ಲಿ ದೃಢೀಕರಿಸಬೇಕು. 3) ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್ ನಕಲು. 4) ವಿದ್ಯಾರ್ಥಿ ಭಾವಚಿತ್ರ.
ಶರತ್ತುಗಳು: 1) 60% ಗಿಂತ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಮಾತ್ರ
2) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿರಬೇಕು
3) 2024_2025ನೇ ಸಾಲಿನಲ್ಲಿ ಉತ್ತೀರ್ಣರಾಗಿರುವವರಿಗೆ ಮಾತ್ರ
4) ಅರ್ಜಿ ಸಲ್ಲಿಸಲು ಕೊನೆ ದಿನಾಂಕ 31 ಮೇ 2024
5) ಸರಕಾರಿ ಮತ್ತು ಖಾಸಗಿ ಶಾಲೆ ಮಕ್ಕಳಿಗೆ ಅನ್ವಯ
ಅರ್ಜಿಗಳನ್ನು ಸಲ್ಲಿಸಬೇಕಾದ ಕಚೇರಿಯ ವಿಳಾಸ: ಭಗತ್ ಸಿಂಗ್ ಜಾರಿಟಬಲ್ ಟ್ರಸ್ಟ್ 1ನೇ ವಾರ್ಡ್ ಬಿ ಜಿ ಎಸ್ ಶಾಲೆ ಪಕ್ಕ ಸಿಟಿಜನ್ ಕ್ಲಬ್ ಸರ್ಕಲ್ ಚಿಕ್ಕಬಳ್ಳಾಪುರ.
ಹೆಚ್ಚಿನ ಮಾಹಿತಿಗಾಗಿ: ಮೊಬೈಲ್ ದೂರವಾಣಿ ಸಂಖ್ಯೆ 7259563585, 9071078211, 9980693959, 8904634613 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ.
ವರದಿ: ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.