ಚಿಕ್ಕಮಗಳೂರು (www.vknews.in) : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊಕ್ಕಳ್ಳಿ ಬಳಿ ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ.
ಟ್ರ್ಯಾಕ್ಟರ್ ನಲ್ಲಿದ್ದ ಸತೀಶ್ (28) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಣಕಲ್ ನಿಂದ ಸಾರಗೋಡು ಗ್ರಾಮಕ್ಕೆ 50 ಕ್ಕೂ ಹೆಚ್ಚಿನ ಗೊಬ್ಬರ ಚೀಲ ತುಂಬಿಕೊಂಡು ಟ್ರ್ಯಾಕ್ಟರ್ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.