ಮೆಕ್ಸಿಕೊ (www.vknews.in) : ಮೆಕ್ಸಿಕನ್ ನಗರದ ಕ್ಯುರ್ನಾವಾಕಾದ ರಸ್ತೆಯಲ್ಲಿ ಕಾರು ಅಪಘಾತದಲ್ಲಿ ತೀವ್ರ ಸ್ವರೂಪದ ಗಾಯಗಳಾಗಿದ್ದ ಯುವತಿಯರು ಜೊತೆಯಾಗಿ ಕೂತು ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ. ಐವರು ಯುವತಿಯರು ಕಾರಿನಲ್ಲಿ ಹೋಗುತ್ತಿರಬೇಕಾದರೆ ಲೋಮಾಸ್ ಡೆಲ್ ಮಿರಾಡೋರ್ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರು ನಜ್ಜುಗುಜ್ಜಾಗಿದೆ.
ಇಬ್ಬರು ಯುವತಿಯರು ಕಾರಿನಿಂದ ಹೊರಬಿದ್ದು ತೀವ್ರತರದ ಗಾಯಗಳಾಗಿದೆ. ಪಾದಚಾರಿ ಮಾರ್ಗದಲ್ಲಿ ಇಬ್ಬರು ಯುವತಿಯರು ಬಿದ್ದಿದ್ದು, ಇತರೆ ಮೂವರು ಕಾರಿನಲ್ಲಿ ಸಿಲುಕಿಕೊಂಡಿದ್ದಾರೆ. ಆದರೆ ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವತಿಯರು ಗಾಯಗೊಂಡಿದ್ದರೂ ಅಪಘಾತವಾದ ಕಾರಿನ ಮುಂದೆ ಕುಳಿತು ಸೆಲ್ಫಿಗಾಗಿ ಪೋಸ್ ನೀಡಿದ್ದಾರೆ. ಆಂಬ್ಯುಲೆನ್ಸ್ ಬರುವವರೆಗೆ ಇಬ್ಬರು ಸೆಲ್ಫಿಗೆ ಪೋಸ್ ನೀಡಿದ್ದಾರೆ.
ಕಾರಿನಲ್ಲಿದ್ದವರು ಮದ್ಯದ ಅಮಲಿನಲ್ಲಿದ್ದರು ಎಂದು ಶಂಕಿಸಲಾಗಿದೆ. ಸೆಲ್ಫಿಗೆ ಪೋಸ್ ಕೊಡುತ್ತಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಬ್ಯುಲೆನ್ಸ್ ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸೆಲ್ಫಿಗೆ ಪೋಸ್ ಕೊಟ್ಟಿರುವ ಫೋಟೋ ವೈರಲ್ ಆಗಿದ್ದು, ಅನೇಕರು ಇಬ್ಬರು ಯುವತಿಯರ ವರ್ತನೆ ಕಂಡು ಟೀಕಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.