ಉಡುಪಿ (www.vknews.in) : ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ಹೋಗಿದ್ದ ಯುವಕನೋರ್ವ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆದಿದೆ. ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತ ದುರ್ದೈವಿ. ರಕ್ಷಿತ್ ಎಂಎಸ್ಆರ್ ಎಸ್ ಕಾಲೇಜು ಶಿರ್ವದಲ್ಲಿ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ.
ಇವರು ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ಹೋಗಿದ್ದಾಗ ಸಿಡಿಲು ಬಡಿದು ನೆಲಕ್ಕೆ ಬಿದ್ದಿದ್ದರು. ರಕ್ಷಿತ್ ನನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಕೊನೆಯುಸಿರೆಳೆದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.