ಮುಂಬಯಿ (www.vknews.in) : ಕಪಿಲ್ ಶರ್ಮಾ ಶೋನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಕೆಲ ದಿನಗಳ ಹಿಂದೆ 26 ವರ್ಷದ ಯುವತಿಗೆ ಆನ್ಲೈನ್ನಲ್ಲಿ ಆನಂದ್ ಎನ್ನುವವನ ಪರಿಚಯವಾಗಿದೆ. ಟಿವಿ ಉದ್ಯಮದ ಪ್ರಮುಖ ವ್ಯಕ್ತಿಗಳೊಂದಿಗೆ ತನಗೆ ಸಂಪರ್ಕವಿದೆ ಮತ್ತು ಕಪಿಲ್ ಶರ್ಮಾ ಶೋನಲ್ಲಿ ಕೆಲಸ ಕೊಡಿಸುವುದಾಗಿ ಆನಂದ್ ಯುವತಿಯನ್ನು ನಂಬಿಸಿದ್ದಾನೆ.
ಇದನ್ನೇ ನಂಬಿದ್ದ ಯುವತಿ ಅಡಿಷನ್ ನೀಡಲು ಬನ್ನಿ ಎಂದು ಆನಂದ್ ಹೇಳಿದ್ದ ವಿಳಾಸಕ್ಕೆ ಹೋಗಿದ್ದಾರೆ. ಅಡಿಷನ್ ಉತ್ತಮವಾದರೆ ಮುಂದೆ ಕಾಸ್ಟಿಂಗ್ ಡೈರೆಕ್ಟರ್ ಬಳಿ ಕರೆದುಕೊಂಡು ಹೋಗುತ್ತೇನೆ ಎಂದು ಆನಂದ್ ಹೇಳಿದ್ದಾನೆ. ಅಡಿಷನ್ ಗೆಂದು ಯುವತಿ ಪಾಲ್ಘರ್ ಜಿಲ್ಲೆಯ ನಲಸೋಪಾರಾ ಪ್ರದೇಶದಲ್ಲಿರುವ ಆನಂದ್ ಮನೆಗೆ ಹೋಗಿದ್ದಾಳೆ. ಇದೇ ವೇಳೆ ಅಡಿಷನ್ ನೆಪದಲ್ಲಿ ಆನಂದ್ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದಾದ ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಆಕೆ ವಿರೋಧಿಸಿದಾಗ ದೈಹಿಕವಾಗಿ ಹಲ್ಲೆ ನಡೆಸಿ ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಯುವತಿ ದೂರು ನೀಡಿದ್ದಾಳೆ. ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.