ಬೆಳ್ತಂಗಡಿ (www.vknews.in) : ಮಂಗಳೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಶಾಲಪ್ಪ ಗೌಡ ಯಾನೆ ಪ್ರಶಾಂತ (35) ಮೃತಪಟ್ಟವರು.
ಅವರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಮಂಗಳವಾರ ಇನ್ನೋವಾ ಕಾರು ಢಿಕ್ಕಿಯಾಗಿ ತಲೆ ಹಾಗೂ ಹೊಟ್ಟೆ ಭಾಗಕ್ಕೆ ತೀವ್ರ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.