(www.vknews. in) ; ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಈ ಹಿಂದೆ ಸಮಾದೇಷ್ಟರಾಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಕೆ.ಪಿ. ಬಿಂದುಸಾರ ಶೆಟ್ಟಿ ಅವರು ಇತ್ತೀಚೆಗೆ ನಿಧನರಾಗಿರುತ್ತಾರೆ.
ವಯೋ ಸಹಜ ಹಾಗೂ ಅಲ್ಪಕಾಲದ ಅನಾರೋಗ್ಯದಿಂದ ಮೃತರಾಗಿರುತ್ತಾರೆ. ಇವರು ಸಮಾದೇಷ್ಟರಾಗಿ ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿರುತ್ತಾರೆ.
ಶ್ರೀಯಂತರ ಅಗಲಿಕೆಯಿಂದ ಗೃಹರಕ್ಷಕ ಸಂಸ್ಥೆಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಹಾಗೂ ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಸಂತಾಪ ಸೂಚನೆ ಸಭೆಯನ್ನು ದಿನಾಂಕ 28,05,2024ರಂದು ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ನೆರವೇರಿಸಲಾಯಿತು.
ಸಂತಾಪ ಸೂಚನಾ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾIIಮುರಳಿ ಮೋಹನ ಚುಂತಾರೂ ಸೇರಿದಂತೆ ಅನೇಕ ಗೃಹರಕ್ಷಕರು ಈ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿದ್ದರು,
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.