ಶಿಡ್ಲಘಟ್ಟ, (ವಿಶ್ವ ಕನ್ನಡಿಗ ನ್ಯೂಸ್): ರಾಜ್ಯ ವಿಧಾನಸಭೆಯ ಮೂಲಕ ನಡೆಯಲಿರುವ ವಿಧಾನಪರಿಷತ್ತಿನ ಚುನಾವಣೆಗೆ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರು,ಮುಖ್ಯಮಂತ್ರಿ,ಹಾಗೂ ಉಪಮುಖ್ಯಮಂತ್ರಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಸಂಯೋಜಕ ಹಾಗೂ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ವೀಕ್ಷಕ ಸೈಯದ್ ಎಂ.ಡಿ ಮುಜಾಹಿದ್ ಪಾಷ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕ ಹೇಳಿಕೆ ನೀಡಿರುವ ಅವರು ವಿಧಾನ ಪರಿಷತ್ತಿನ ಸ್ಥಾನಕ್ಕಾಗಿ ಅನೇಕರು ಈಗಾಗಲೇ ಪಕ್ಷದ ಅಧ್ಯಕ್ಷರಿಗೆ, ಮುಖ್ಯಮಂತ್ರಿಗಳಿಗೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ತಮ್ಮ ಮನವಿಯನ್ನು ಒಳಗೊಂಡಂತೆ ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ ಆದರೆ ಅವಕಾಶ ಕೊಡುವ ಸಂದರ್ಭದಲ್ಲಿ ಪಕ್ಷದ ಸಂಘಟನೆಗಾಗಿ ನಿಷ್ಠೆಯಿಂದ ದುಡಿದಿರುವ ಸಾಮಾನ್ಯ ಕಾರ್ಯಕರ್ತರಿಗೆ ಪಕ್ಷದ ವರಿಷ್ಠರು ಹಾಗೂ ಹಿರಿಯ ಮುಖಂಡರು ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ಕವಿ ವಾಣಿಯಂತೆ ಸರ್ವಜನಾಂಗದ ಶಾಂತಿಯ ತೋಟ ಕರ್ನಾಟಕ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡುವ ಸಲುವಾಗಿ ಎಲ್ಲ ಜಾತಿ ಜನಾಂಗದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅವಕಾಶವನ್ನು ಒದಗಿಸಿದ್ದಾರೆ ವಿಶೇಷವಾಗಿ ಕಳೆದ ವಿಧಾನ ಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದವರು ಕಾಂಗ್ರೆಸ್ ಪಕ್ಷವನ್ನು ಸ್ಪಷ್ಟ ಬಹುಮತದಿಂದ ಬೆಂಬಲಿಸಿ ಸಹಕಾರ ನೀಡಿದ್ದಾರೆ ಸಮುದಾಯದ ಜನರಿಗೆ ವಿಶೇಷವಾಗಿ ಹೊಸ ಮುಖಗಳಿಗೆ ವಿಧಾನಪರಿಷತ್ ಸದಸ್ಯರನ್ನಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂಬುದು ಸಮಾಜದ ಮುಖಂಡರ ಆಶಯವಾಗಿದೆ ಎಂದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಸಚಿವರ ಮಕ್ಕಳಿಗೆ ಟಿಕೆಟ್ ನೀಡಲಾಗಿತ್ತು ಎಂಬ ಅಪವಾದಯಿದೆ ಅದೇ ರೀತಿ ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಿಗೆ ಅನ್ಯಾಯ ಮಾಡಲಾಗಿದ್ದು ಅದನ್ನು ಸರಿಪಡಿಸುವ ಸಲುವಾಗಿ ವಿಧಾನಪರಿಷತ್ತಿನ ಸ್ಥಾನವನ್ನು ಮುಸ್ಲಿಂ ಸಮುದಾಯದವರಿಗೆ ವಿಶೇಷವಾಗಿ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ವರದಿ: ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.