ಚಿಂದ್ವಾರ (www.vknews.in) : ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯ ಬೋದಲ್ ಕಚಾರ್ ಗ್ರಾಮದಲ್ಲಿ ಒಂದೇ ಕುಟುಂಬದ ಎಂಟು ಮಂದಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಾನಸಿಕ ಅಸ್ವಸ್ಥನಾಗಿದ್ದ ದಿನೇಶ್ ತನ್ನ ಕುಟುಂಬ ಸದಸ್ಯರನ್ನು ಕೊಡಲಿಯಿಂದ ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಚಿಂದ್ವಾರ ಪೊಲೀಸ್ ವರಿಷ್ಠಾಧಿಕಾರಿ ಖಚಿತಪಡಿಸಿದ್ದಾರೆ.
ಮಂಗಳವಾರ ರಾತ್ರಿ ದಿನೇಶ್ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾರೆ. ಕಿರುಚಾಟ ಕೇಳಿ ಅಕ್ಕಪಕ್ಕದವರು ಮನೆಗೆ ನುಗ್ಗಿದಾಗ ಯುವಕ ಓಡಿ ಹೋಗಿದ್ದಾನೆ. ನಂತರ ಆತನ ಶವ ಸಮೀಪದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹಲ್ಲೆಯಿಂದ ಪಾರಾದ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದಿನೇಶ್ ಅವರ ತಾಯಿ ಸಿಯಾಬಾಯಿ (55), ಪತ್ನಿ ವರ್ಷಾ (23), ಸಹೋದರ ಶ್ರವಣ್ ಕುಮಾರ್ (35), ಶ್ರವಣ ಅವರ ಪತ್ನಿ ಬಾರತೋಬಾಯಿ (30), 16 ವರ್ಷದ ಸಹೋದರಿ ಪಾರ್ವತಿ, ಐದು ವರ್ಷದ ಕೃಷ್ಣ, ಸೇವಂತಿ (ನಾಲ್ಕು) ಮತ್ತು ದೀಪಾ (ಒಂದು) ನಿಧನರಾದರು.
ಇದೇ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಪಾಲಪುರದಲ್ಲಿ ಇಂತಹುದೇ ಘಟನೆ ನಡೆದಿತ್ತು. ವ್ಯಕ್ತಿಯೊಬ್ಬ ತನ್ನ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದನು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.