ಬೆಳ್ತಂಗಡಿ (www.vknews.in) : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಮೂವರು ಯುವಕರು ಬಲಾತ್ಕಾರದಿಂದ ಅತ್ಯಾಚಾರ ಮಾಡಿ ಆಕೆ ಆರು ತಿಂಗಳ ಗರ್ಭವತಿಯಾಗಲು ಕಾರಣವಾಗಿರುವ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ತಡವಾಗಿ ಬೆಳಕಿಗೆ ಬಂದಿದೆ.
ನೊಂದ ಬಾಲಕಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮೇ 31ರಂದು ನೀಡಿದ ದೂರಿನ ಮೇರೆಗೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿ ಮೂವರ ವಿರುದ್ಧ ಗ್ಯಾಂಗ್ ರೇಪ್ ಮತ್ತು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಸಂಬಂಧ ಮೂಡುಬಿದಿರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್ (26), ಫಾರೂಕ್ (19) ಹಾಗೂ 18 ವರ್ಷ ತುಂಬದ ಬಾಲಕನನ್ನು ಜೂ. 1ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬಾಲಕನನ್ನು ಮಂಗಳೂರು ಬಾಲ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ರಿಮ್ಯಾಂಡ್ ಹೋಂಗೆ ಸೇರಿಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.