(Www.vknews. in)ಉಳ್ಳಾಲ: ಪುತ್ತೂರಿನಿಂದ ಮಂಗಳೂರು ತೆರಲುತಿದ್ದ ಬಸ್ ಮತ್ತು ಯೇನಪೋಯ ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ಸೋಮವಾರ ನಡೆದಿದೆ.
ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಶಿವಶಂಕರ್ ಬಸ್ ಮತ್ತು ಯೇನಪೋಯ ಮೆಡಿಕಲ್ ಕಾಲೇಜಿನ ಬಸ್ ಪರಸ್ಪರ ಢಿಕ್ಕಿ ಹೊಡೆದಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಎರಡು ವಾಹನಗಳಿಗೂ ಹಾನಿಯಾಗಿದೆ. ಘಟನೆಯಿಂದ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.