ಬೆಂಗಳೂರು (www.vknews.in) | ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹೀನಾಯ ಸೋಲು ಅನುಭವಿಸಿದ್ದಾರೆ. ಪ್ರಜ್ವಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೌಡ ವಿರುದ್ಧ 45,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ.
ದೇವೇಗೌಡರ ಕುಟುಂಬದ ಭದ್ರಕೋಟೆಯಾಗಿದ್ದ ಹಾಸನದಲ್ಲಿ 25 ವರ್ಷಗಳ ಬಳಿಕ ಜೆಡಿಎಸ್ ಹೀನಾಯ ಸೋಲು ಅನುಭವಿಸಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ.
ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ನಂತರ ಜರ್ಮನಿಗೆ ಪಲಾಯನ ಮಾಡಿದ್ದ ಪ್ರಜ್ವಲ್, ಮೊನ್ನೆ ತನಿಖಾ ತಂಡದ ಮುಂದೆ ಶರಣಾಗಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.