ಬಂಟ್ವಾಳ (www.vknews. in) : ಮಾಣಿ – ಪೆರಾಜೆ, ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ “ವಿಕಾಸ ವನ- ಗಿಡ ಮೂಲಿಕೆಗಳ ಉದ್ಯಾನವನ” ವನ್ನು ಉದ್ಘಾಟಿಸಲಾಯಿತು. ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಕಹಿಬೇವಿನ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿದರು.
ಬಳಿಕ ಮಾತನಾಡಿದ ಅವರು ”ಪ್ರತಿವರ್ಷವೂ ವನ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ವನಮಹೋತ್ಸವ ಕೇವಲ ಗಿಡ ನೆಡುವುದಕ್ಕೆ ಸೀಮಿತವಾಗಿರದೆ, ಅದರ ಪಾಲನೆ ಪೋಷಣೆ ಮಾಡಬೇಕು. ದೇಶದ ಜವಾಬ್ದಾರಿಯುತ ಪ್ರಜೆಗಳಾದ ನಾವೆಲ್ಲರೂ ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರವನ್ನು ನಿರ್ಮಿಸಬೇಕು” ಎಂದರು .
ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಶೆಟ್ಟಿ, ಶಾಲಾ ಸಿಬ್ಬಂದಿ ವರ್ಗ, ಕಬ್ಸ್ – ಬುಲ್ ಬುಲ್ಸ್, ಸ್ಕೌಟ್ಸ್ – ಗೈಡ್ಸ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಹ ಶಿಕ್ಷಕಿ ಯಶೋಧ ಕೆ ಕಾರ್ಯಕ್ರಮ ನಿರ್ವಹಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.