ಬಂಟ್ವಾಳ (www.vknews. in) : ಸಜೀಪ ಮುನ್ನೂರು – ಮಾರ್ನಬೈಲ್ ಇಲ್ಲಿನ ಮೆಲ್ಕಾರ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಎಂ.ಡಿ.ಮಂಚಿ, ಅವರು ‘ಜಾಗತಿಕ ತಾಪಮಾನ ಏರಿಕೆ ತಡೆಗಟ್ಟುವಲ್ಲಿ ಯುವಜನರ ಪಾತ್ರ ‘ ಎನ್ನುವ ವಿಚಾರದ ಕುರಿತು ಮಾಹಿತಿ ನೀಡಿದ ಅವರು ಜಾಗತಿಕ ತಾಪಮಾನದಿಂದ ಆಗುತ್ತಿರುವ ದುಷ್ಪರಿಣಾಮಗಳು, ಜಾಗತಿಕ ಮಟ್ಟದಲ್ಲಿ ಈ ಕುರಿತು ನಡೆಯುತ್ತಿರುವ ಚಟುವಟಿಕೆಗಳು, ಯುವಜನತೆ, ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಫಯಾಜ್ ದೊಡ್ಡಮನೆ ಮಾತನಾಡುತ್ತಾ, ಪರಿಸರಕ್ಕೆ ಮಾರಕವಾದ ವಸ್ತುಗಳನ್ನು ಬಳಸದೆ, ಪೂರಕವಾದ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಸುನೀತ ಪಿರೇರ, ಎಸ್.ಎಂ.ಆರ್ ಪಬ್ಲಿಕ್ ಸ್ಕೂಲ್ ನ ಮುಖ್ಯ ಶಿಕ್ಷಕಿ ಫಾತಿಮತ್ ಝಹಿರ ಉಪಸ್ಥಿತರಿದ್ದರು. ಇದೇ ವೇಳೆ ವಿದ್ಯಾರ್ಥಿಗಳು ಕಾಲೇಜು ಪರಿಸರದಲ್ಲಿ ಗಿಡಗಳನ್ನು ನೆಟ್ಟರು. ಉಪನ್ಯಾಸಕರುಗಳಾದ ಅಬ್ದುಲ್ ಮಜಿದ್ ಎಸ್ ಸ್ವಾಗತಿಸಿ, ಸೌಮ್ಯ ವಂದಿಸಿದರು. ತಾಜುನ್ನಿಸ ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.