ಉಳ್ಳಾಲ (www.vknews.in) : ಇಲ್ಲಿನ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರ ಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬರು ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೃತರನ್ನು ಆಂಧ್ರ ಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್.ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಮೃತಪಟ್ಟವರು.
ಸೋಮವಾರ ಸಂಜೆ ಉಳ್ಳಾಲ ಬೀಚ್ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದ ಪರಿಣಾಮ ನಾಲ್ವರು ಮಹಿಳೆಯರು ಸಮುದ್ರಪಾಲಾಗಿದ್ದರು. ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಈ ಪೈಕಿ ಪರಿಮೀ ರತ್ನ ಕುಮಾರಿ ಅವರಿಗೆ ಪ್ರಜ್ಞೆ ತಪ್ಪಿದ್ದ ಕಾರಣ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ವಿಪರೀತ ಮಳೆಯ ಕಾರಣದಿಂದ ಸಮುದ್ರ ಪ್ರಶ್ಯುಬ್ದಗೊಂಡಿದ್ದು ಸ್ಥಳೀಯರು ಎಚ್ಚರಿಕೆ ನೀಡಿದರೂ ಕೆಲವೊಂದು ಪ್ರವಾಸಿಗರು ಎಚ್ಚರಿಕೆ ಮಾತನ್ನು ಕಿವಿಗೆ ಹಾಕಿಕೊಳ್ಳದಿರುದೇ ಅಪಘಡಕ್ಕೆ ಕಾರಣ ಎನ್ನಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.