ಬಂಟ್ವಾಳ (www.vknews.in) : ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಬೆಳಿಗ್ಗೆ ಕಲ್ಲಡ್ಕಕ್ಕೆ ಭೇಟಿ ನೀಡಿ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಕಲ್ಲಡ್ಕ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ ಮಾಡುವ ಕಾಮಗಾರಿ ಭರದಿಂದ ಸಾಗುತ್ತಿದೆಯಾದರೂ ವಾಹನ ಸಂಚಾರಕ್ಕೆ ಅನುಕೂಲವಾದ ಸರ್ವಿಸ್ ರಸ್ತೆ ನಿರ್ಮಿಸದೆ ವಾಹನ ಸವಾರರು ಕೆಸರು ಮಿಶ್ರಿತ ಹೊಂಡ ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ.
ಇದೀಗ ಮಳೆಗಾಲ ಆರಂಭವಾದಾಗಿನಿಂದ ವಾಹನ ಸವಾರರು ಬಹಳಷ್ಟುತೊಂದರೆ ಅನುಭವಿಸುತ್ತಿದ್ದಾರೆ. ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಲ್ಲಡ್ಕಕ್ಕೆ ಬೇಟಿ ನೀಡಿದ ಅವರು ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯವರಿಗೆ ಕೆಲವು ನಿರ್ದೇಶನ ನೀಡಿದ್ದಾರೆ .
ನಿರ್ಮಾಣ ಹಂತದಲ್ಲಿರುವ ಪಿಲ್ಲರ್ ಗಳ ಸಮೀಪದಲ್ಲಿ ನೀರು ಸರಾಗವಾಗಿ ಹರಿದು ಹೋಗುವುದಕ್ಕಾಗಿ ಒಳ ಭಾಗದಲ್ಲಿ ಚರಂಡಿ ಮಾಡಲು ಸೂಚನೆ ನೀಡಿದ್ದಾರೆ. ಪಾದಚಾರಿಗಳು ದಾಟಲು 4 ಪಾಯಿಂಟ್ಗಳಲ್ಲಿ ಸಮತಲವಾದ ಕಾಲುದಾರಿಗಳನ್ನು ಸ್ಥಾಪಿಸಿಕೊಡುವಂತೆ ತಿಳಿಸಿದ್ದಾರೆ.
ಕಲ್ಲು ಮಣ್ಣುಗಳನ್ನು ಅಲ್ಲಲ್ಲಿ ರಾಶಿ ಹಾಕಿರುವುದನ್ನು ತೆಗೆದು ಸ್ವಚ್ಛ ಮಾಡಿ ಎಂದಿದ್ದಾರೆ. ಸರ್ವೀಸ್ ರಸ್ತೆಯಲ್ಲಿ ಸರಾಗವಾಗಿ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಲು ನಿರಂತರವಾಗಿ ಸಿಮೆಂಟ್ ಜಲ್ಲಿಕಲ್ಲಿನ ಮಿಶ್ರಣವನ್ನು ಹಾಕಿ ಸಮಸ್ಯೆ ಪರಿಹಾರ ಮಾಡುವಂತೆ ಸೂಚನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್, ಬಂಟ್ವಾಳ ಸಂಚಾರಿ ಪೊಲೀಸ್ ಠಾಣಾಧಿಕಾರಿ ಸುತೇಶ್, ಕೆ.ಎನ್.ಆರ್.ಸಿ.ಕಂಪೆನಿಯ ಎ.ಜಿ.ಎಮ್ ರೋಹಿತ್ ರೆಡ್ಡಿ ಕಂದಾಯ ನಿರೀಕ್ಷಕ ಜನಾರ್ದನ, ವಿಜಯ್ ಮತ್ತಿತರ ಪ್ರಮುಖರು ಹಾಜರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.