(www.vknews. in) ; ಸುರಕ್ಷಾ ದಂತ ಚಿಕಿತ್ಸಾ ಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಿನಾಂಕ ೧೨/೦೬/೨೦೨೫ ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು.ಸುಮಾರು ೫೫ ಮಂದಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.
ಶ್ರೀ ರಜಾಕ್ ಮತ್ತು ನಫೀಸಾ ದಂಪತಿಗಳಿಗೆ ಹಲಸಿನಹಣ್ಣಿನ ಗಿಡವನ್ನು ಡಾ ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಾ ರಾಜಶ್ರೀ ಮೋಹನ್,ದಂತ ಪರಿಚಾರಕಿಯರಾದ ರಮ್ಯಾ, ಚೈತ್ರಾ, ಸುಷ್ಮಿತಾ, ಜಯಶ್ರೀ ಮುಂತಾದವರು ಉಪಸ್ಥಿತರಿದ್ದರು. ಕಳೆದ ಹತ್ತು ವರುಷಗಳಿಂದ ಸುರಕ್ಷಾ ದಂತ ಚಿಕಿತ್ಸಾಲಯ ನಿರಂತರವಾಗಿ ಸಸಿ ವಿತರಣೆ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಜೂನ್ ತಿಂಗಳಿಡೀ ಆಚರಿಸುತ್ತಾ ಬಂದಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.