ಮಂಗಳೂರು (www.vknews.in) : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು.ಹೆಚ್. ರವರು ಇಂದು ಅಧಿಕಾರ ಸ್ವೀಕರಿಸಿದರು.
ಮಂಗಳೂರು ತಾಲೂಕು ಪಂಚಾಯಿತಿ ಕಟ್ಟಡದಲ್ಲಿರುವ ಬ್ಯಾರಿ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಬ್ಯಾರಿ ಭವನಕ್ಕೆ ಜಾಗ ಇದ್ದು, ಆರು ಕೋಟಿ ರೂ. ಹಣವೂ ಇದೆ. ಬಹುವರ್ಷಗಳ ಕನಸಾಗಿರುವ ಬ್ಯಾರಿ ಭವನ ನಿರ್ಮಾಣವನ್ನು ನನ್ನ ಅವಧಿಯಲ್ಲಿ ನನಸಾಗಿಸುತ್ತೇನೆ ಎಂದು ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ.
ವಸ್ತು ಸಂಗ್ರಹಾಲಯವನ್ನು ರೂಪಿಸಲೂ ಆಧ್ಯತೆ ನೀಡಲಾಗುವುದು. ಜತೆಗೆ ಪುಸ್ತಕ ಭಂಡಾರ ಮತ್ತು ಸುಸಜ್ಜಿತ ಗ್ರಂಥಾಲಯದ ನಿರ್ಮಾಣದ ಕನಸೂ ಇದೆ. ಅಕಾಡೆಮಿ ಸದಸ್ಯರ ಜೊತೆ ಚರ್ಚಿಸಿ ಇದನ್ನು ಅನುಷ್ಠಾನ ಗೊಳಿಸಲಾಗುವುದು ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.