ಬಂಟ್ವಾಳ (www.vknews.in) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಶರೀಫ್ ಭೂಯಾ ಅವರ ತಾಯಿ, ಪಾಣೆಮಂಗಳೂರು ಸಮೀಪದ ಬೋಗೋಡಿ ನಿವಾಸಿ ಝುಬೈದಾ (60) ಅನಾರೋಗ್ಯದಿಂದ ಶುಕ್ರವಾರ (ಜೂನ್ 14) ಮಧ್ಯಾಹ್ನ ಕೇರಳದಲ್ಲಿನ ತಮ್ಮ ಕಿರಿಯ ಪುತ್ರನ ನಿವಾಸದಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ಸಮಯಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕೆಲದಿನಗಳ ಹಿಂದೆ ಚಿಕಿತ್ಸೆ ಪ್ರಯುಕ್ತ ಕೇರಳದ ತನ್ನ ಪುತ್ರನ ಮನೆಗೆ ತೆರಳಿದ್ದರು. ಶುಕ್ರವಾರ ಮಧ್ಯಾಹ್ನ ಅನಾರೋಗ್ಯ ಉಲ್ಬಣಗೊಂಡು ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಮೃತರ ಇಚ್ಛೆಯಂತೆ ಪುತ್ರನ ಊರಿನಲ್ಲೇ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.