ಮಂಗಳೂರು (www.vknews. in) : ನಗರದ ಮುಳಿಹಿತ್ಲು ನಿವಾಸಿ ಅಜ್ಮಲ್ ಭಾಜಿ (57) ಅವರು ಹಠಾತ್ ಹೃದಯಾಘಾತದಿಂದ ಗುರುವಾರ ಬೆಳಗ್ಗಿನ ಜಾವ ನಿಧನರಾದರು.
ಕುದ್ರೋಳಿ ಹಝ್ರತ್ ಅವರ ಪುತ್ರರಾಗಿರುವ ಇವರು ಗುರುವಾರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದರು. ಮಧ್ಯರಾತ್ರಿ ವೇಳೆ ಹಠಾತ್ ಹೃದಯ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾತ ಬಂಧು-ಬಳಗವನ್ನು ಅಗಲಿದ್ದಾರೆ. ಶುಕ್ರವಾರ ಸಂಜೆ ವೇಳೆಗೆ ಬೋಳಾರದ ಮಸೀದಿಯಲ್ಲಿ ದಫನ ಕಾರ್ಯ ನೆರವೇರಿಸಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.