ಮುಂಬೈ (www.vknews.in) : ಮುಂಬೈನ ಚೆಂಬೂರ್ ನಲ್ಲಿರುವ ಆಚಾರ್ಯ ಕಾಲೇಜಿನಲ್ಲಿ ಹಿಜಾಬ್ ಗೆ ನಿಷೇಧ ಹೇರಲಾಗಿದ್ದು, ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕುವಂತೆ ಒಂಬತ್ತು ವಿದ್ಯಾರ್ಥಿನಿಯರು ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಕಾಲೇಜು ಆಡಳಿತವು ಧರ್ಮದ ಆಧಾರದಲ್ಲಿ ಪಕ್ಷಪಾತ ಮಾಡುತ್ತಿದೆ ಎಂಬ ಆರೋಪವನ್ನೂ ವಿದ್ಯಾರ್ಥಿಗಳು ಮಾಡಿದ್ದಾರೆ. ಮುಂಬೈನ ಎನ್.ಜಿ.ಆಚಾರ್ಯ ಮತ್ತು ಡಿ.ಕೆ.ಮರಾಠೆ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ನ 9 ವಿದ್ಯಾರ್ಥಿನಿಯರು, ಕಾಲೇಜು ಆಡಳಿತವು ಇತ್ತೀಚೆಗೆ ಜಾರಿಗೆ ತಂದಿರುವ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ನ ಮೊರೆ ಹೋಗಿದ್ದಾರೆ.
ಡ್ರೆಸ್ ಕೋಡ್ ಅಡಿಯಲ್ಲಿ, ವಿದ್ಯಾರ್ಥಿನಿಯರು ಕ್ಯಾಂಪಸ್ ನಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ. ಅರ್ಜಿದಾರ ವಿದ್ಯಾರ್ಥಿನಿಯರು ಹೊಸ ಡ್ರೆಸ್ ಕೋಡ್ ತಮ್ಮ ಖಾಸಗಿತನ, ಘನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ಕಾಲೇಜಿನಲ್ಲಿ ಯಾರೂ ನಮಗೆ ಸಹಾಯ ಮಾಡಲಾರರು, ಹೀಗಾಗಿ ನಮಗೆ ಕಂಡಿದ್ದು ನ್ಯಾಯಾಲಯದ ದಾರಿ ಮಾತ್ರ ಎಂದು ಕಾಲೇಜು ವಿದ್ಯಾರ್ಥಿನಿ ಝೈನಾಬ್ ಚೌಧರಿ ಹೇಳಿದ್ದಾರೆ. ಜೊತೆಗೆ ನ್ಯಾಯಾಲಯದ ತೀರ್ಪು ನಮ್ಮ ಪರವಾಗಿ ಬರುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.