(www.vknews.in) : ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ಸಂತ್ರಸ್ತ ಕನ್ನಡಿಗನ ಕುಟುಂಬಕ್ಕೆರಾಜ್ಯ ಸರ್ಕಾರದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಕರ್ನಾಟಕದ ಗುಲ್ಬರ್ಗ ಜಿಲ್ಲೆಯ ಅಳಂದ್ ತಾಲೂಕಿನ ವಿಜಯ್ ಕುಮಾರ್ ಕುಟುಂಬಕ್ಕೆ ಪರಿಹಾರ ಧನ ಸಿಗಲಿದೆ. ಕರ್ನಾಟಕ ಅನಿವಾಸಿ ಭಾರತೀಯರ ಸಮಿತಿಯ ರಾಜ್ಯ ಉಪಾಧ್ಯಕ್ಷ ಆರತಿ ಕೃಷ್ಣ ರವರ ಪ್ರಯತ್ನದಿಂದಾಗಿ ಇದು ಸಾಧ್ಯವಾಗಿದೆ.
ಜೂನ್ 10 ರಂದು ಕುವೈತ್ ನಲ್ಲಿ ಆಕಸ್ಮಿಕ ಅಗ್ನಿ ದುರಂತ ನಡೆದಿತ್ತು. ಇದರಲ್ಲಿ ಒಟ್ಟು 45 ಭಾರತೀಯರು ಸಾವನ್ನಪ್ಪಿದ್ದರು. ಹಲವರಿಗೆ ಗಾಯಗಳಾಗಿದೆ. ಮೃತಪಟ್ಟವರಲ್ಲಿ ಕರ್ನಾಟಕದ ಗುಲ್ಬರ್ಗ ಜಿಲ್ಲೆಯ ವಿಜಯ್ ಕುಮಾರ್ ಸಹ ಒಬ್ಬರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.