ಬಂಟ್ವಾಳ (www.vknews. in): ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡ ಘಟನೆ ಬಿ ಕಸ್ಬಾ ಗ್ರಾಮದ ನೆರೆ ಪರಿಹಾರ ರಸ್ತೆಯ ಕ್ರಾಸ್ ಬಳಿ ಬುಧವಾರ ಸಂಜೆ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರನನ್ನು ಬಿ ಸಿ ರೋಡು ಸಮೀಪದ ಶಾಂತಿಅಂಗಡಿ ನಿವಾಸಿ ಮಹಮ್ಮದ್ ಇರ್ಶಾದ್ (24) ಎಂದು ಹೆಸರಿಸಲಾಗಿದೆ. ಇವರು ತನ್ನ ಸ್ಕೂಟರಿನಲ್ಲಿ ಕಡೂರು-ಬಿ ಸಿ ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಬಿ ಕಸಬಾ ಗ್ರಾಮದ ನೆರೆ ಪರಿಹಾರ ರಸ್ತೆಯ ಕ್ರಾಸ್ ಬಳಿ ತಲುಪಿದಾಗ ಬಿ ಸಿ ರೋಡು ಕಡೆಯಿಂದ ನಾಸೀರ್ ಎಂಬವರು ಚಲಾಯಿಸಿಕೊಂಡು ಬಂದ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದು ಗಾಯಗೊಂಡ ಸ್ಕೂಟರ್ ಸವಾರ ಇರ್ಶಾದ್ ನನ್ನು ಬಿ ಸಿ ರೋಡು ಸೋಮಯಾಜಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.