(www.vknews.in) : ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ವಿರಾಟ್ ಕೊಹ್ಲಿ ಈ ವಿಷಯವನ್ನು ಪ್ರಕಟಿಸಿದರು. ಈ ಪಂದ್ಯದಲ್ಲಿ ಕೊಹ್ಲಿ 59 ಎಸೆತಗಳಲ್ಲಿ 76 ರನ್ ಗಳಿಸಿದರು.
“ಇದು ನನ್ನ ಕೊನೆಯ ಟಿ20 ವಿಶ್ವಕಪ್. ಭಾರತಕ್ಕೆ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೇವೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಬಂದಿದೆ. ನಾವು ಐಸಿಸಿ ಟೂರ್ನಿ ಗೆಲ್ಲಲು ಕಾಯುತ್ತಿದ್ದೆವು,’’ ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ವಿರಾಟ್ ಕೊಹ್ಲಿ 125 ಟಿ20 ಪಂದ್ಯಗಳಲ್ಲಿ 4188 ರನ್ ಗಳಿಸಿದ್ದಾರೆ. ಅವರು 38 ಅರ್ಧಶತಕ ಮತ್ತು 1 ಶತಕದೊಂದಿಗೆ 137 ರ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ರೋಹಿತ್ ಶರ್ಮಾ ನಂತರ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.