ಬಂಟ್ವಾಳ (www.vknews. in) : ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಕಸಬಾ ಗ್ರಾಮದ ಎಂಪಾಯರ್ ಮಾಲ್ ಬಳಿ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು ಲೋಕಪ್ಪ ಗೌಡ ಎಂದು ಹೆಸರಿಸಲಾಗಿದೆ. ಇವರು ವಿಟ್ಲ-ಕಬಕ ರಸ್ತೆಯಲ್ಲಿ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ವಿಟ್ಲ ಎಂಪಾಯರ್ ಮಾಲ್ ಬಳಿ ಅನ್ವರ್ ಸಾದಿಕ್ ಎಂಬವರು ಚಲಾಯಿಸಿಕೊಂಡು ಬಂದ ಅಟೊ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಗಾಯಗೊಂಡ ಲೋಕಪ್ಪ ಗೌಡ ಅವರನ್ನು ವಿಟ್ಲ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಗಾಯಾಳು ಲೋಕಪ್ಪ ಗೌಡ ಅವರ ಸಹೋದರ ಕೃಷ್ಣಪ್ಪ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.