ಬಂಟ್ವಾಳ (www.vknews. in) : ಕೆ ಎಸ್ ಆರ್ ಟಿ ಸಿ ಬಸ್ಸು ಹಾಗೂ ಎರಡು ಬೈಕುಗಳ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಪುದು ಗ್ರಾಮದ ಮಾರಿಪಳ್ಳ ಜಂಕ್ಷನ್ ಬಳಿ ಭಾನುವಾರ ಸಂಜೆ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ನಯನ್ ಕುಮಾರ್ ಹಾಗೂ ಗಾಯಗೊಂಡ ಇನ್ನೊಂದು ಬೈಕ್ ಸವಾರನನ್ನು ಹಾರೂನ್ ರಶೀದ್ ಎಂದು ಹೆಸರಿಸಲಾಗಿದೆ. ಭಾನುವಾರ ಸಂಜೆ ಸಂಜಯ್ ಕುಮಾರ್ ಎಂಬವರು ಬಿ ಸಿ ರೋಡು ಕಡೆಯಿಂದ ಮಂಗಳೂರು ಕಡೆಗೆ ಚಲಾಯಿಸಿಕೊಂಡು ಬಂದ ಕೆ ಎಸ್ ಆರ್ ಟಿ ಸಿ ಬಸ್ಸು ಮಾರಿಪಳ್ಳ ಜಂಕ್ಷನ್ನಿನಲ್ಲಿ ಎರಡು ಬೈಕುಗಳಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ತಲೆಗೆ ಗಂಭೀರ ಗಾಯಗೊಂಡ ನಯನ್ ಕುಮಾರ್ ಅವರನ್ನು ಸ್ಥಳೀಯರು ತಕ್ಷಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದರಾದರೂ ಅದಾಗಲೆ ಆತ ಮೃತಪಟ್ಟಿದ್ದಾನೆ. ಇನ್ನೋರ್ವ ಬೈಕ್ ಸವಾರ ಹಾರೂನ್ ರಶೀದ್ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಮಾರಿಪಳ್ಳ ನಿವಾಸಿ ಇಝಾದ್ ಅಹ್ಮದ್ ಬಾವ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.