ಬಂಟ್ವಾಳ (www.vknews. in) : ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಕಾಡಬೆಟ್ಟು ಗ್ರಾಮದ ವಗ್ಗ ಎಂಬಲ್ಲಿ ಶನಿವಾರ ಸಂಜೆ ಸಂಭವಿಸಿದೆ.
ಮೃತ ಸ್ಕೂಟರ್ ಸವಾರನನ್ನು ಸಮಿತ್ ಹಾಗೂ ಗಾಯಗೊಂಡ ಸಹಸವಾರನನ್ನು ಗುರುಪ್ರೀತ್ ಎಂದು ಹೆಸರಿಸಲಾಗಿದೆ. ಇವರಿಬ್ಬರು ಸ್ಕೂಟರಿನಲ್ಲಿ ತೆರಳುತ್ತಿದ್ದ ವೇಳೆ ನಿಶೇಮಪ್ಪ ವಾಲಿ ಶೆಟ್ಟರ್ ಎಂಬವರು ಚಲಾಯಿಸಿಕೊಂಡು ಬಂದ ಲಾರಿ ವಗ್ಗದಲ್ಲಿ ಸ್ಕೂಟರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ.
ತಕ್ಷಣ ಸ್ಥಳೀಯರು ಇವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರಾದರೂ ಅದಾಗಲೇ ಸವಾರ ಸಮಿತ್ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಸಹಸವಾರ ಗುರುಪ್ರೀತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಗ್ಗ ನಿವಾಸಿ ನಾರಾಯಣ ಶೆಟ್ಟಿ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.