ಬಂಟ್ವಾಳ (www.vknews.in) : ಪಿಕಪ್ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ವೀರಕಂಭ ಗ್ರಾಮದ ಮಚ್ಚ ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು ಮಂಗಿಲಪದವು ನಿವಾಸಿ ಶೋಭಿತ್ ಕುಮಾರ್ ಪಿ ಎಂದು ಹೆಸರಿಸಲಾಗಿದೆ. ಇವರು ತನ್ನ ದ್ವಿಚಕ್ರ ವಾಹನದಲ್ಲಿ ವಿಟ್ಲದಿಂದ ಮಂಗಿಲಪದವಿನ ಪೊನ್ನೆತ್ತಡಿಗೆ ತೆರಳುತ್ತಿದ್ದ ವೇಳೆ ವೀರಕಂಭ ಗ್ರಾಮದ ಮಚ್ಚ ಎಂಬಲ್ಲಿ ಎದುರಿನಿಂದ ಕೆ ವಸಂತ ಎಂಬವರು ಚಲಾಯಿಸಿಕೊಂಡು ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ರಸ್ತೆಗೆ ಬಿದ್ದ ಶೋಭಿತ್ ಅವರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಗಾಯಾಳು ಶೋಭಿತ್ ಅವರ ಚಿಕ್ಕಪ್ಪ ಹೊನ್ನಪ್ಪ ಗೌಡ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.