ಮಂಗಳೂರು (www.vknews. in) : ಉಳ್ಳಾಲ ಖಾಝಿ ಸಯ್ಯಿದ್ ಕೂರತ್ ತಂಙಳ್ ಅವರ ನಿಧನಕ್ಕೆ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ತೀವ್ರ ಸಂತಾಪ ಸೂಚಿಸಿದ್ದಾರೆ.
ಇಸ್ಲಾಮಿಕ್ ವಿದ್ವಾಂಸರಾದ ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ಕೂರ ಅವರ ನಿಧನದ ವಾರ್ತೆ ತಿಳಿದು ಮನಸ್ಸಿಗೆ ಅತೀವ ನೋವಾಯಿತು. ನನಗೆ ಅವರ ಜೊತೆ ನಿಕಟ ಸಂಪರ್ಕ ಇತ್ತು. ಅವರ ಹಠಾತ್ ನಿಧನದಿಂದ ನಾನು ದುಃಖಿತನಾಗಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯ ಸರ್ವ ಜನಾಂಗದ ಜನರಿಗೆ ಮಾರ್ಗದರ್ಶಕರಾಗಿದ್ದ ಅವರ ಅಗಲಿಕೆಯು ನಾಡಿನ ಧಾರ್ಮಿಕ, ಸಾಮಾಜಿಕ ಮತ್ತು ಸೌಹಾರ್ದ ಪರಂಪರೆಗೆ ದೊಡ್ಡ ನಷ್ಟ ತಂದಿದೆ ಎಂದವರು ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ವಿಷಾದಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.