ನವದೆಹಲಿ (www.vknews.in) : ಚಾಲಕನ ಅಗತ್ಯವಿಲ್ಲದ ಸ್ವಯಂಚಾಲಿತ ಕಾರುಗಳನ್ನು ಭಾರತದಲ್ಲಿ ಅನುಮತಿಸಲಾಗುವುದಿಲ್ಲ ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಅಂತಹ ವಾಹನಗಳಿಂದ 80 ಲಕ್ಷ ಚಾಲಕರು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಗಡ್ಥರಿ ಹೇಳಿದ್ದಾರೆ. ಅಮೆರಿಕದಲ್ಲಿ ನಡೆದ ಚರ್ಚೆಯಲ್ಲಿ ಈ ಬಗ್ಗೆ ಗಮನಸೆಳೆದಿದ್ದೇನೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
ಟೆಸ್ಲಾ ಸೇರಿದಂತೆ ಕಂಪನಿಗಳು ಚಾಲಕರಹಿತ ಕಾರುಗಳನ್ನು ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವ ಸಮಯದಲ್ಲಿ ಗಡ್ಕರಿ ಅವರ ಹೇಳಿಕೆ ಬಂದಿದೆ. ಟೆಸ್ಲಾದ ಸಾಮಾನ್ಯ ಕಾರುಗಳನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕಂಪನಿ ಘೋಷಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.