ಬಂಟ್ವಾಳ (www.vknews. in) : ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರನನ್ನು ಬೆಳ್ತಂಗಡಿ ನಿವಾಸಿ ಗಣೇಶ್ (39) ಎಂದು ಹೆಸರಿಸಲಾಗಿದೆ. ಗಣೇಶ್ ಅವರು ಬೈಕಿನಲ್ಲಿ ಸಂಚರಿಸುತ್ತಿರುವಾಗ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಮಹಮ್ಮದ್ ಆಸಿಫ್ ಎಂಬವರು ಚಲಾಯಿಸುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಅಪಘಾತದಿಂದ ಬೈಕ್ ಸಮೇತ ರಸ್ತೆಗೆಸೆಯಲ್ಪಟ್ಟ ಗಣೇಶ್ ಅವರು ಗಾಯಗೊಂಡಿದ್ದು, ಅವರನ್ನು ಮಂಗಳೂರು ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.