ಬೆಂಗಳೂರು (www.vknews.in) : ಸರ್ಕಾರದ ಅನ್ನಭಾಗ್ಯ ಯೋಜನೆಗೆಂದು ನೀಡಲಾಗಿದ್ದ ಎರಡು ಕೋಟಿಗೂ ಅಧಿಕ ಮೌಲ್ಯದ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಬಿಜೆಪಿ ನಾಯಕನ ಬಂಧನವಾಗಿದೆ. ಮುಖಂಡ ಮಣಿಕಾಂತ್ ರಾಥೋಡ್ ಅವರನ್ನು ಬಂಧಿಸಲಾಗಿದೆ.
ಯಾದಗಿರಿ ಜಿಲ್ಲೆಯ ಶಹಾಪುರದ ಸರ್ಕಾರಿ ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ 6077 ಕ್ವಿಂಟಾಲ್ ಅಕ್ಕಿಯನ್ನು ರಾಥೋಡ್ ಕಳ್ಳತನ ಮಾಡಿದ್ದಾರೆ. ಕಲಬುರಗಿಯಲ್ಲಿರುವ ರಾಠೋಡ್ ಅವರ ಮನೆಯಲ್ಲಿ ಶಹಾಪುರ ಪೊಲೀಸರು ಬಂಧಿಸಿದ್ದಾರೆ.
ರಾಥೋಡ್ ಅವರನ್ನು ಪೊಲೀಸರು ವಿಚಾರಣೆಗೆ ಕರೆದರೂ ಹಾಜರಿರಲಿಲ್ಲ. ಇದಾದ ಬಳಿಕ ಆತನನ್ನು ಬಂಧಿಸಲಾಗಿತ್ತು. ರಾಥೋಡ್ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದರು.
ಅನ್ನಭಾಗ್ಯ ಯೋಜನೆಯು ಆರ್ಥಿಕವಾಗಿ ಹಿಂದುಳಿದ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಿಂಗಳಿಗೆ 19 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.