ಬಂಟ್ವಾಳ (www.vknews. in) : ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಸರಕಾರಿ ಶಾಲೆಗಳ ಹಸಿರು, ಹಾಗೂ ನೈರ್ಮಲತೆ ಯನ್ನು ಗುರುತಿಸಿ ಕೊಡಮಾಡುವ ಹಸಿರು ನೈರ್ಮಲ್ಯ ಅಭ್ಯುದಯ ಶಾಲಾ ಪ್ರಶಸ್ತಿ – 2024 ಗೆ ಬಂಟ್ವಾಳ ತಾಲೂಕಿನ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಏಮಾಜೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ.
ಸರಕಾರಿ ಶಾಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ವಚ್ಛತೆ ಮತ್ತು ಸುಸ್ಥಿರತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಶಾಲೆಗಳನ್ನು ಆಯ್ಕೆ ಮಾಡಿ ಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾಗಲು 22 ಮಾನದಂಡಗಳಿದ್ದು, ಟ್ರಸ್ಟ್ನ ತಂಡ ಅರ್ಜಿ ಸಲ್ಲಿಸಿದ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆಯ ಬಳಿಕ ಪ್ರಶಸ್ತಿಗಳಿಗೆ ಆಯ್ಕೆ ನಡೆಯುತ್ತದೆ.
ಈ ನಿಟ್ಟಿನಲ್ಲಿ ಪ್ರಶಸ್ತಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆ ಆಯ್ಕೆಯಾಗಿದೆ. ಜುಲೈ 27 ರಂದು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.