ಪುತ್ತೂರು (www.vknews. in) : ಕಾರು ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಬೆಳ್ಳಿಚೆಡಾವು ಎಂಬಲ್ಲಿ ಸಂಭವಿಸಿದೆ. ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ಮಸೂದ್ ಎಂದು ಹೆಸರಿಸಲಾಗಿದೆ.
ಅಬ್ದುಲ್ ಸಾದಿಕ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಾಯಗೊಂಡ ಮಸೂದ್ ಅವರನ್ನು ಸ್ಥಳೀಯರಾದ ಅಬ್ದುಲ್ ಹಮೀದ್ ಹಾಗೂ ಅಮೀರ್ ಎಂಬವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.