(www.vknews. in) : ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ ಆ. 4ರಂದು ಅಪರಾಹ್ನ 2.30ರಿಂದ 4.30ರ ತನಕ ಚೊಕ್ಕಾಡಿಯ ಶ್ರೀ ರಾಮ ದೇವಾಲಯದ ದೇಸೀ ಭವನದಲ್ಲಿ ನಡೆಯಲಿದೆ.
ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ರಿ, ಮಂಗಳೂರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ಘಟಕ, ಜೇಸಿಐ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭಿನಂದನಾ ಸಮಿತಿ ಅಧ್ಯಕ್ಷ ಆನೆಕಾರ ಗಣಪಯ್ಯ ವಹಿಸಲಿದ್ದಾರೆ.
ಖ್ಯಾತ ಸಾಹಿತಿ ಸುಬ್ರಾಯ ಚೊಕ್ಕಾಡಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಅಭಿನಂದನಾ ಭಾಷಣವನ್ನು ಮೂಡುಬಿದಿರೆಯ ಇತಿಹಾಸ ತಜ್ಞರೂ, ಲೇಖಕರೂ ಆಗಿರುವ ಡಾ. ಪುಂಡಿಕ್ಯಾ ಗಣಪಯ್ಯ ಭಟ್ ಮಾಡಲಿದ್ದಾರೆ. ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ಮತ್ತು ಜೇಸಿಐ ಬೆಳ್ಳಾರೆ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.