(www.vknews. in) ; ವಿದ್ಯಾರ್ಥಿ ಪರಿಷತ್ ಮತ್ತು ವಿವಿಧ ಸಂಘಟನೆಗಳ ಉದ್ಘಾಟನಾ ಕಾರ್ಯಕ್ರಮ ಕಣಚೂರು ಮಹಿಳಾ ಪದವಿ ಪೂವ೯ ಕಾಲೇಜು, ದೇರಳಕಟ್ಟೆಯಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್ತು ಮತ್ತು ವಿವಿಧ ಸಂಘಟನೆಗಳ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಯೇನಪೋಯ ವೈದ್ಯಕೀಯ ವಿಶ್ವವಿದ್ಯಾಲಯ ಇ.ಎನ್.ಟಿ ವಿಭಾಗದ ಪ್ರೊಫೆಸರ್ ಮತ್ತು ರಿಜಿಸ್ಟ್ರಾರ್ ಆಗಿರುವ ಡಾ.ಗಂಗಾಧರ ಸೋಮಯಾಜಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಒತ್ತಡಗಳಿಗೆ ಒಳಗಾಗದೇ ತಮ್ಮ ಸ್ವ ಆಸಕ್ತಿಯ ವಿಷಯಗಳ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ವಿಯಾಗುತ್ತಾರೆ. ಅಲ್ಲದೇ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಒಳ್ಳೆಯ ಭವಿಷ್ಯ ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಕಾಲೇಜಿನ ಸಲಹಾ ಸಮಿತಿಯ ಮುಖ್ಯಸ್ಥರಾದ ಪ್ರೋ. ಎಮ್. ಅಬ್ದುಲ್ ರೆಹಮಾನ್ ರವರು ವಿದ್ಯಾರ್ಥಿಗಳು ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು, ವಿದ್ಯಾರ್ಥಿ ಸಂಘವನ್ನು ಮುನ್ನಡೆಸಿಕೊಂಡು ಹೋಗಲು ಬೇಕಾದ ಹಲವು ವಿಚಾರಗಳನ್ನು ಹಂಚಿಕೊಂಡರು.
ಕಣಚೂರು ಸಂಸ್ಥೆಗಳ ಸಂಚಾಲಕರಾದ ಅಬ್ದುಲ್ ರಹಮಾನ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜಕ್ಕೆ ಸಹಕಾರಿಯಾಗುವಂತಹ ಶಿಕ್ಷಣವು, ವಿದ್ಯಾರ್ಥಿಗಳಿಗೆ ಸಿಗಬೇಕಿದೆ. ಕಾಲೇಜಿನ ಮತದಾನವು ವಿದ್ಯಾರ್ಥಿಗಳಿಗೆ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸುವಲ್ಲಿ ಸಹಕಾರಿಯಾಗಿದ್ದು, ವಿದ್ಯಾರ್ಥಿ ಸಂಘವು ಇದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಜುಲೈಕತ್ ಮಾಶ, ಉಪಾಧ್ಯಕ್ಷರಾಗಿ ನೀಶಾ, ಕ್ರೀಡಾ ಕಾರ್ಯದರ್ಶಿಯಾಗಿ ಸ್ವಫೀದಾ , ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಫಾತಿಮ ಶೀಬಾ ಇವರು ಮತದಾನ ಪ್ರಕ್ರಿಯೆಯ ಮೂಲಕ ಆಯ್ಕೆಯಾದರು. ಪ್ರಾಂಶುಪಾಲರಾದ ಶಾಹಿದ ಬಿ.ಎಮ್. ಕಾರ್ಯಕ್ರಮಕ್ಕೆ ಸ್ವಾಗತಿಸಿ, ಉಪನ್ಯಾಸಕಿ ಶಿಭಾನಿ ವಂದಿಸಿದರು. ಉಪನ್ಯಾಸಕಿಯರಾದ ರೂಪ ಮತ್ತು ಚೇತನಾ ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.